ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ: ಮತದಾನದ ವೇಳೆ ಸಾಮಾಜಿಕ ಅಂತರ ನಿಯಮ ಉಲ್ಲಂಘನೆ - ಚಿತ್ರದುರ್ಗ ಸುದ್ದಿ 2020
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-9339347-55-9339347-1603868134754.jpg)
ಚಿತ್ರದುರ್ಗ: ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಆಗ್ನೇಯ ಪದವೀಧರರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಲ್ಲಿ ಪ್ರಜ್ಞಾವಂತ ಮತದಾರರು ನಿರ್ಲಕ್ಷ್ಯ ವಹಿಸಿದರು. ಚಿತ್ರದುರ್ಗದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮತಗಟ್ಟೆಯಲ್ಲಿ ಮತದಾನಕ್ಕೂ ಮುನ್ನ ವೋಟರ್ ಲಿಸ್ಟ್ನಲ್ಲಿ ತಮ್ಮ ಹೆಸರು ಹುಡುಕುವ ಭರದಲ್ಲಿ ಪದವೀಧರರಲ್ಲಿ ಸಾಮಾಜಿಕ ಅಂತರ ಮರೆಯಾಗಿದ್ದು ಕಂಡುಬಂತು. ಬಳಿಕ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಜಿ. ರಾಧಿಕಾ ಸ್ಥಳಕ್ಕೆ ಭೇಟಿ ನೀಡಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಮನವಿ ಮಾಡಿದರು.