ಸಾರ್ವಜನಿಕರಿಗೆ ಸಿಹಿ ವಿತರಿಸಿ ಕ್ರಿಸ್ಮಸ್ ಆಚರಣೆ - Christmas celebration 2020
🎬 Watch Now: Feature Video
ಹುಬ್ಬಳ್ಳಿ: ಕ್ರಿಸ್ಮಸ್ ಹಬ್ಬದ ಪ್ರಯುಕ್ತ ನಗರದ ಸಮಾಜ ಸೇವಕಿ ಹಾಗೂ ಅಖಿಲ್ ಭಾರತ ಕ್ರೈಸ್ತ ಮಹಾಸಭಾ ರಾಷ್ಟ್ರೀಯ ಮಹಿಳಾ ಪ್ರಧಾನ ಕಾರ್ಯದರ್ಶಿ ಐರಿನ್ ಮುರನಾಳ್ ಕೊರೊನಾ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಹಾಗೂ ಕಾರ್ಮಿಕರಿಗೆ ಸಿಹಿ ವಿತರಣೆ ಮಾಡಿ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಿದರು. ವಿವಿಧ ಸ್ಥಳಕ್ಕೆ ತೆರಳಿದ ಅವರು, ಕೊರೊನಾ ತಡೆಗಟ್ಟಲು ಸರ್ಕರ ಹಲವಾರು ರೀತಿಯಲ್ಲಿ ಹೋರಾಟ ಮಾಡುತ್ತಿದೆ. ನಾವೂ ಸಹ ಕ್ರಿಸ್ಮಸ್ ಹಬ್ಬವನ್ನು ಸರಳವಾಗಿ ಆಚರಣೆ ಮಾಡುವ ಜೊತೆಗೆ ಸಾರ್ವಜನಿಕರಿಗೆ ಆರೋಗ್ಯದ ಬಗ್ಗೆ ತಿಳಿ ಹೇಳುತ್ತಿರುವುದಾಗಿ ಅವರು ತಿಳಿಸಿದ್ದಾರೆ.