ಕಲಬುರಗಿಯಲ್ಲಿ ಸರಳ-ಸಂಭ್ರಮದ ಕ್ರಿಸ್ಮಸ್ ಆಚರಣೆ - ಕಲಬುರಗಿ ಕ್ರಿಸ್ಮಸ್ ಆಚರಣೆ ಸುದ್ದಿ
🎬 Watch Now: Feature Video
ಕಲಬುರಗಿ : ಜಿಲ್ಲೆಯಾದ್ಯಂತ ಕ್ರಿಸ್ಮಸ್ ಸಂಭ್ರಮ ಮನೆ ಮಾಡಿದೆ. ಕ್ರೈಸ್ತ ಬಾಂಧವರು ಶ್ರದ್ಧಾಭಕ್ತಿಯಿಂದ ಹಬ್ಬ ಆಚರಣೆ ಮಾಡುತ್ತಿದ್ದಾರೆ. ಚರ್ಚ್‌ಗಳಿಗೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ನಗರದ ಸೇಂಟ್ ಮೇರಿ ಹಾಗೂ ಮೆಥೋಡಿಸ್ಟ್ ಚರ್ಚ್ಗಳಲ್ಲಿ ಪ್ರಾರ್ಥನೆ ಸಲ್ಲಿಸಲಾಗಿದೆ. ವಿಶ್ವದಲ್ಲಿ ಶಾಂತಿ ನೆಲೆಸಲಿ, ದುಷ್ಟ ಶಕ್ತಿಗಳು ತೊಲಗಲಿ, ಎಲ್ಲರಿಗೂ ಸುಖ-ಸಮೃದ್ಧಿ ಸಿಗಲಿ ಎಂದು ಪ್ರಾರ್ಥನೆ ಸಲ್ಲಿಸಲಾಯಿತು. ಕ್ರೈಸ್ತ ಬಾಂಧವರು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು. ಕ್ರಿಸ್ಮಸ್ ಹಿನ್ನೆಲೆ ಚರ್ಚ್ಗಳ ಬಳಿ ವಿಶೇಷ ಅಲಂಕಾರ ಮಾಡಲಾಗಿತ್ತು. ಚರ್ಚ್ಗಳ ಮುಂದೆ ಏಸುಕ್ರಿಸ್ತನ ಬದುಕನ್ನು ಬಿಂಬಿಸುವ ಗೋದಲಿಗಳನ್ನು ನಿರ್ಮಾಣ ಮಾಡಲಾಗಿದೆ.