ಪ್ರಸಿದ್ಧ ಸೆಂಟ್ ಫಿಲೋಮಿನಾ ಚರ್ಚ್ನಲ್ಲಿ ಕ್ರಿಸ್ಮಸ್ಗೆ ಸಿದ್ಧತೆ - St. Philomena Church
🎬 Watch Now: Feature Video
ಮೈಸೂರು: ಕೋವಿಡ್-19 ಹಿನ್ನೆಲೆ ಈ ಬಾರಿ ಕ್ರಿಸ್ಮಸ್ ಹಬ್ಬವನ್ನು ಸರಳವಾಗಿ ಆಚರಿಸುತ್ತಿದ್ದು, ನಗರದ ಪ್ರಸಿದ್ಧ ಸೆಂಟ್ ಫಿಲೋಮಿನಾ ಚರ್ಚ್ನಲ್ಲಿ ಕ್ರಿಸ್ಮಸ್ ಸಿದ್ಧತಾ ಕಾರ್ಯ ನಡೆಸಲಾಗುತ್ತಿದೆ. ಪ್ರಸಿದ್ಧ ಪ್ರವಾಸಿ ತಾಣ ಹಾಗೂ ನಗರದ ಮುಖ್ಯವಾದ ಚರ್ಚ್ ಆಗಿರುವ ಸೆಂಟ್ ಫಿಲೋಮಿನಾದಲ್ಲಿ ಅಂತಿಮ ಹಂತದ ಸಿದ್ಧತೆ ನಡೆಯುತ್ತಿದೆ. ಈ ಬಾರಿಯ ಕ್ರಿಸ್ಮಸ್ ಕೇವಲ ಪ್ರಾರ್ಥನೆಗಷ್ಟೇ ಸೀಮಿತವಾಗಿದ್ದು, ಚರ್ಚ್ಗೆ ಬರುವವರು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. ಕ್ರಿಸ್ಮಸ್ ದಿನದಂದು ನಡೆಯಲಿರುವ ಎಲ್ಲಾ ಕಾರ್ಯಕ್ರಮಗಳನ್ನು ಆನ್ಲೈನ್ ಮೂಲಕ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ. ಸರ್ಕಾರದ ಮಾರ್ಗಸೂಚಿಯಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಕ್ರಿಸ್ಮಸ್ ಹಬ್ಬವನ್ನು ಆಚರಿಸಲಾಗುತ್ತದೆ ಎಂದು ಸೆಂಟ್ ಫಿಲೋಮಿನಾ ಚರ್ಚ್ನ ಆಡಳಿತ ಮಂಡಳಿ ತಿಳಿಸಿದೆ.