ಗದಗ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ CITU ಪ್ರತಿಭಟನೆ - Protest in Gadag
🎬 Watch Now: Feature Video
ಗದಗ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದಲ್ಲಿ CITU ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಗಾಂಧಿ ವೃತ್ತದಿಂದ ಜಿಲ್ಲಾಡಳಿತ ಭವನದವರೆಗೆ ಪ್ರತಿಭಟನಾ ಮೆರವಣಿಗೆಗೆ ಮುಂದಾಗಿದ್ದ ವೇಳೆ ಪೊಲೀಸರು ಮೆರವಣಿಗೆಗೆ ಅವಕಾಶವಿಲ್ಲ ಎಂದು ತಡೆದರು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್ ಪ್ರತಿಭಟನೆ ಹತ್ತಿಕ್ಕುತ್ತಿದ್ದಾರೆ ಎಂದು ಅವರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.