ಗುತ್ತಿಗೆದಾರನ ಕಿರುಕುಳಕ್ಕೆ ಬೇಸತ್ತು ಪೌರ ಕಾರ್ಮಿಕ ಮಹಿಳೆ ಆತ್ಮಹತ್ಯೆಗೆ ಯತ್ನ - Dharwad Latest News Update
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-10229179-thumbnail-3x2-sss.jpg)
ಧಾರವಾಡ : ಗುತ್ತಿಗೆದಾರನ ಕಿರುಕುಳಕ್ಕೆ ಬೇಸತ್ತು ಮಹಿಳಾ ಪೌರ ಕಾರ್ಮಿಕರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ ಜನ್ನತನಗರದಲ್ಲಿ ನಡೆದಿದೆ. 19ನೇ ವಾರ್ಡಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮಹಿಳಾ ಕಾರ್ಮಿಕೆ ಮಂಜುಳಾ ಮಾದರ ಎಂಬಾಕೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. 19ನೇ ವಾರ್ಡಿನ ಗುತ್ತಿಗೆದಾರ ನರಸಿಂಹ ಸಗಬಾಲ್ ಎಂಬುವರು ನೀಡುತ್ತಿದ್ದ ಕಿರುಕುಳದಿಂದಲೇ ತಾವು ಆತ್ಮಹತ್ಯೆಗೆ ಯತ್ನಿಸಿದ್ದಾಗಿ ಮಂಜುಳಾ ಮಾದರ ಆರೋಪ ಮಾಡಿದ್ದಾರೆ. ಇದೀಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಕೆಯನ್ನು ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ದಾಖಲು ಮಾಡಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಜಿಲ್ಲೆಯ ವಿದ್ಯಾಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.