ವಿವಿಧ ಬೇಡಿಕೆಗೆ ಆಗ್ರಹಿಸಿ ಧಾರವಾಡದಲ್ಲಿ ಪೌರ ಕಾರ್ಮಿಕರ ಪ್ರತಿಭಟನೆ... ಹೇಗಿತ್ತು ಹೋರಾಟದ ಕಿಚ್ಚು? - civil workers protest latest news
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5561993-thumbnail-3x2-drwd.jpg)
ವಿವಿಧ ಬೇಡಿಕೆಗೆ ಆಗ್ರಹಿಸಿ ಸಫಾಯಿ ಕರ್ಮಚಾರಿ ಕಾವಲು ಸಮಿತಿ ವತಿಯಿಂದ ಪೌರ ಕಾರ್ಮಿಕರು ಪ್ರತಿಭಟನಾ ಮೆರವಣಿಗೆ ನಡೆಸಿದರು. ಧಾರವಾಡದ ಕಲಾಭವನದಿಂದ ಪ್ರಾರಂಭವಾದ ಪ್ರತಿಭಟನಾ ಮೆರವಣಿಗೆ ಪ್ರಮುಖ ವೃತ್ತಗಳ ಮೂಲಕ ಜಿಲ್ಲಾಧಿಕಾರಿ ಕಚೇರಿ ತಲುಪಿ ಕ್ರಾಂತಿಗೀತೆ ಹಾಡಿದರು. ಪ್ರತಿಭಟನಾ ಮೆರವಣಿಗೆಯುದ್ದಕ್ಕೂ ಹಲಿಗೆ ಬಾರಿಸುವ ಮೂಲಕ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಮ್ಯಾನುಯಲ್ ಸ್ಕ್ಯಾವೆಂಜರ್ ಮಲದ ಗುಂಡಿಗಳಲ್ಲಿ ಮಲ ಹೋರುವ ವೃತ್ತಿ ಮಾಡುತ್ತಿರುವ ಕುಟುಂಬಗಳಿಗೆ ಸೂಕ್ತ ಪುನರ್ವಸತಿ ನೀಡಬೇಕು, ಹಾಗೂ ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರನ್ನು ಖಾಯಂ ನೌಕರರಾಗಿ ಮಾಡಬೇಕು ಎಂದು ಆಗ್ರಹಿಸಿದರು.