ಬ್ಯಾನರ್ ತೆರವುಗೊಳಿಸುವ ವೇಳೆ ವಿದ್ಯುತ್ ತಗುಲಿ ಪೌರಕಾರ್ಮಿಕ ಸಾವು - tumkuru dasara news
🎬 Watch Now: Feature Video
ತುಮಕೂರು : ಬ್ಯಾನರ್ ಮತ್ತು ಬಂಟಿಂಗ್ಸ್ ಗಳನ್ನು ತೆರವುಗೊಳಿಸುವ ವೇಳೆ ವಿದ್ಯುತ್ ತಂತಿ ತಗುಲಿ ಪೌರಕಾರ್ಮಿಕರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದಲ್ಲಿ ನಡೆದಿದೆ. ಪೌರಕಾರ್ಮಿಕ ನರಸಿಂಹ(28) ಮೃತ. ನಗರದಲ್ಲಿ ಹಾಕಲಾಗಿದ್ದ ಬ್ಯಾನರ್ ಮತ್ತು ಬಂಟಿಂಗ್ಸ್ಗಳನ್ನು ತೆರವುಗೊಳಿಸುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿದ್ದು ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಆಗಮಿಸಿ ಮಾತನಾಡಿದ ಶಾಸಕ ಜ್ಯೋತಿ ಗಣೇಶ್ ಪೌರಕಾರ್ಮಿಕನ ಸಾವಿನಿಂದ ನಮಗೂ ನೋವಾಗಿದೆ. ಮೃತನ ಕುಟುಂಬಕ್ಕೆ ಪರಿಹಾರವನ್ನು ನೀಡಲಾಗುತ್ತದೆ. ಅವರ ಕುಟುಂಬದವರಿಗೆ ಕೆಲಸ ಮತ್ತು ಮಕ್ಕಳಿಗೆ ಪದವಿವರೆಗೆ ಉಚಿತ ಶಿಕ್ಷಣ ನೀಡಲಾಗುತ್ತದೆ ಎಂದು ಭರವಸೆ ನೀಡಿದರು.
Last Updated : Oct 11, 2019, 11:34 AM IST