ವಿಧಾನಪರಿಷತ್ನಲ್ಲಿ ಕೈ-ಕಮಲ ಸದಸ್ಯರ ನಡುವೆ ತಳ್ಳಾಟ-ನೂಕಾಟ - ವಿಧಾನಪರಿಷತ್ನಲ್ಲಿ ಕಾಂಗ್ರೆಸ್ -ಬಿಜೆಪಿ ನಡುವೆ ಗಲಾಟೆ
🎬 Watch Now: Feature Video
ಬೆಂಗಳೂರು: ಗೋಹತ್ಯೆ ನಿಷೇಧ ವಿಧೇಯಕ ಹಾಗು ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಕುರಿತಂತೆ ವಿಧಾನಪರಿಷತ್ನಲ್ಲಿ ಇವತ್ತು ಒಂದು ದಿನದ ವಿಶೇಷ ಅಧಿವೇಶನ ಕರೆಯಲಾಗಿತ್ತು. ಕಲಾಪ ಆರಂಭಕ್ಕೂ ಮುನ್ನ ಸಭಾಪತಿ ಪೀಠದಲ್ಲಿ ಉಪ ಸಭಾಪತಿ ಧರ್ಮೇಗೌಡರನ್ನು ಕುಳ್ಳಿರಿಸಿ ಕಲಾಪ ನಡೆಸಲು ಬಿಜೆಪಿ ಮುಂದಾಗಿದೆ. ಈ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ವಾಗ್ವಾದ, ನೂಕಾಟ-ತಳ್ಳಾಟ ನಡೆದಿದೆ. ಒಂದು ಹಂತದಲ್ಲಿ ಉಭಯ ಪಕ್ಷಗಳ ನಡುವೆ ಗಲಾಟೆ ತಾರಕಕ್ಕೇರಿತು. ಈ ಸಂದರ್ಭದಲ್ಲಿ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಸದನವನ್ನು ಅನಿರ್ಧಿಷ್ಟಾವಧಿ ಕಾಲಕ್ಕೆ ಮುಂದೂಡಿದರು. ಮೇಲ್ಮನೆಯಲ್ಲಿ ನಡೆದ ನಾಟಕೀಯ ಬೆಳವಣಿಗೆಗಳ ವಿಡಿಯೋ ಇಲ್ಲಿದೆ.
Last Updated : Dec 15, 2020, 12:51 PM IST