ಅಗತ್ಯ ವಸ್ತುಗಳ ಖರೀದಿಗೆ ಮುಗಿಬಿದ್ದ ಜನ.. ಅಂಗಡಿ-ಮುಂಗಟ್ಟು ಬಂದ್ ಮಾಡಿಸಿದ ಅಧಿಕಾರಿಗಳು - ಮಂಗಳೂರು ಸುದ್ದಿ
🎬 Watch Now: Feature Video
ಮಂಗಳೂರು: ಕೊರೊನಾ ಸೋಂಕು ಹರಡದಂತೆ ಇಡೀ ಭಾರತವನ್ನೇ ಲಾಕ್ಡೌನ್ ಮಾಡಿ ಪ್ರಧಾನಿ ಮೋದಿ ಆದೇಶ ನೀಡಿದ್ದರೂ ಮಂಗಳೂರಿನಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆಯಿಂದ ಕೆಲ ಹೊತ್ತು ಸಡಿಲಿಕೆ ನೀಡಲಾಗಿತ್ತು. ಆದರೆ, ಜನ ಮಾರುಕಟ್ಟೆಯಲ್ಲಿ ಗುಂಪು ಗುಂಪಾಗಿ ಸೇರಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ದೃಷ್ಟಿಯಿಂದ ಪಾಲಿಕೆಯ ಆರೋಗ್ಯ ಅಧಿಕಾರಿಗಳು ಬಲವಂತದಿಂದ ಅಂಗಡಿ ಮುಂಗಟ್ಟುಗಳನ್ನ ಬಂದ್ ಮಾಡಿಸಿ ಜನರನ್ನು ಮನೆಗೆ ಕಳುಹಿಸಿದ್ರು.