ಮಳೆ,ಚಳಿ,ಗಾಳಿ ಎನ್ನದೇ ಮತಗಟ್ಟೆಗೆ ಬಂದು ಮತ ಚಲಾಯಿಸಿ: ಬಿ.ಎಸ್. ಯಡಿಯೂರಪ್ಪ ಮನವಿ - cm appeals to do vote news
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5266497-thumbnail-3x2-cm.jpg)
ನಾಳೆ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಮತದಾನ ನಡೆಯಲಿದ್ದು, ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ. ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಶೇ.85 ರಷ್ಟು ಮತದಾನ ಮಾಡಿದರೆ ದೇಶದಲ್ಲಿ ಪ್ರಜಾಪ್ರಭುತ್ವ ಗಟ್ಟಿಯಾಗಿರುತ್ತದೆ. ಅದಕ್ಕಾಗಿ ನಾಳೆ ಎಲ್ಲರೂ ಸಹ ಮತದಾನ ಮಾಡಬೇಕು. ಗಾಳಿ, ಮಳೆ, ಚಳಿ ಎನ್ನದೇ ಮತಗಟ್ಟೆಗೆ ಬಂದು ಮತದಾನ ಮಾಡುವಂತೆ ಮನವಿ ಮಾಡಿದರು.