ಕಾಫಿನಾಡಿನ ಹಲವು ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದ ಸಿಎಂ - ವೈದ್ಯಕೀಯ ಸಚಿವ ಸುಧಾಕರ್
🎬 Watch Now: Feature Video
ಚಿಕ್ಕಮಗಳೂರು: ಜಿಲ್ಲೆಯ ಹಲವು ಯೋಜನೆಗಳಿಗೆ ಸಿಎಂ ಯಡಿಯೂರಪ್ಪ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ನಗರದ ಜಿಲ್ಲಾ ಆಟದ ಮೈದಾನದಲ್ಲಿ ಹಲವು ಕಾಮಕಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮಾಡಿದ್ದು, ಒಟ್ಟು 1.060 ಕೋಟಿ ರೂ. ವೆಚ್ಚದ ಕಾಮಗಾರಿ ಹಾಗೂ ಶಂಕುಸ್ಥಾಪನೆ ಮಾಡಲಾಗಿದೆ. ಈ ಕಾರ್ಯಕ್ರಮದಲ್ಲಿ ಡಿಸಿಎಂ ಗೋವಿಂದ ಕಾರಜೋಳ, ಸಚಿವ ಸುಧಾಕರ್, ವಸತಿ ಸಚಿವ ಸೋಮಣ್ಣ, ಬೈರತಿ ಬಸವರಾಜ್, ಸಂಸದೆ ಶೋಭಾ ಕರಂದ್ಲಾಜೆ, ವಿಧಾನ ಪರಿಷತ್ ಉಪಸಭಾಪತಿ ಎಸ್.ಎಲ್.ಧರ್ಮೇಗೌಡ ಸೇರಿದಂತೆ ಹಲವು ಸಚಿವರು, ಶಾಸಕರು ಹಾಗೂ ಬಿಜೆಪಿ ಮುಖಂಡರು ಭಾಗಿಯಾಗಿದ್ದರು.