ಹಾನಗಲ್: ವಿದ್ಯುತ್ ತಂತಿ ತಗುಲಿ ಹೊತ್ತಿ ಉರಿದ ಕಲ್ಪವೃಕ್ಷ - tree burned by electric wire touch
🎬 Watch Now: Feature Video
ಹಾನಗಲ್: ತಾಲೂಕಿನ ಮಲಗುಂದ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿದ ಪರಿಣಾಮ ತೆಂಗಿನ ಮರವೊಂದಕ್ಕೆ ಬೆಂಕಿ ಹೊತ್ತಿಕೊಂಡಿತ್ತು. ಗ್ರಾಮದ ಮಖ್ಯರಸ್ತೆಯಲ್ಲಿರುವ ತೆಂಗಿನ ಮರದ ಗರಿಗಳಿಗೆ ಇದ್ದಕ್ಕಿದ್ದಂತೆ ವಿದ್ಯುತ್ ತಂತಿ ತಗುಲಿದ್ದು, ತಕ್ಷಣ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ್ದರಿಂದ ಭಾರಿ ಅನಾಹುತ ತಪ್ಪಿದೆ. ಇದರಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.