ಕಾಂಗ್ರೆಸ್ಗೆ ಹೋಲಿಸಿದ್ರೆ ಬಿಜೆಪಿಯಲ್ಲೇ ಗುಂಪುಗಾರಿಕೆ ಹೆಚ್ಚು: ರಾಮಲಿಂಗಾರೆಡ್ಡಿ - ರಾಮಲಿಂಗಾರೆಡ್ಡಿ ಲೆಟೆಸ್ಟ್ ನ್ಯೂಸ್
🎬 Watch Now: Feature Video
ಬೆಂಗಳೂರು: ಕಾಂಗ್ರೆಸ್ಗೆ ಹೋಲಿಸಿದರೆ ಬಿಜೆಪಿಯಲ್ಲೇ ಗುಂಪುಗಾರಿಕೆ ಹೆಚ್ಚಿದೆ. ಆದ್ರೆ ಅವರು ತೋರಿಸಿಕೊಳ್ಳುವುದಿಲ್ಲ, ಕಾಂಗ್ರೆಸ್ನಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದೇವೆ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಈಟಿವಿ ಭಾರತನೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಈ ಹಿಂದೆ ಯಡಿಯೂರಪ್ಪ-ಈಶ್ಚರಪ್ಪ ನಡುವೆ ಗುಂಪುಗಾರಿಕೆ ಇದ್ದದ್ದು ಎಲ್ಲರಿಗೂ ಗೊತ್ತಿದೆ. ಬಿಜೆಪಿಯಲ್ಲಿ ನಾಲ್ಕು ಗುಂಪುಗಳಿವೆ. ಜಗದೀಶ್ ಶೆಟ್ಟರ್, ಯಡಿಯೂರಪ್ಪ, ಈಶ್ವರಪ್ಪ ಹೀಗೆ ನಾನಾ ಗುಂಪುಗಳಿವೆ ಎಂದರು. ಇನ್ನು, ಈ ಉಪಚುನಾವಣೆಯಲ್ಲಿ ಅತಿ ಹೆಚ್ಚಿನ ಸ್ಥಾನಗಳನ್ನು ನಾವೇ ಗೆಲ್ಲುತ್ತೇವೆ ಎಂದು ರಾಮಲಿಂಗಾರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದ್ರು.