ಯಾರೇ ಪುಂಡಾಟಿಕೆ ಮಾಡಿದ್ರೂ ಸೂಕ್ತ ಕ್ರಮ ಕೈಗೊಳ್ಳಬೇಕು: ಶಾಸಕ ಅಮೃತ ದೇಸಾಯಿ - Curfew imposed in DJ Halli and KG Halli
🎬 Watch Now: Feature Video
ಧಾರವಾಡ: ಬೆಂಗಳೂರಿನ ಕೆ.ಜೆ.ಹಳ್ಳಿ, ಡಿ.ಜೆ.ಹಳ್ಳಿ ಮತ್ತು ಕಾವಲ್ ಬೈರಸಂದ್ರದಲ್ಲಿ ನಡೆದ ಗಲಾಟೆಯನ್ನು ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ಅಮೃತ ದೇಸಾಯಿ ಖಂಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಮಾಧ್ಯಮದ ಪ್ರತಿನಿಧಿಗಳ ಮೇಲೆ ನಡೆದಿರುವ ಹಲ್ಲೆ ಪ್ರಜಾಪ್ರಭುತ್ವಕ್ಕೆ ಧಕ್ಕೆ ತರುವಂಥದ್ದು. ಹಾಗೆಯೇ ಪೊಲೀಸರ ಮೇಲಿನ ಹಲ್ಲೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸುತ್ತದೆ. ಯಾರೇ ಪುಂಡಾಟಿಕೆ ಮಾಡಿದ್ದರೂ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.