ರಸ್ತೆ ಗುಂಡಿಯಲ್ಲಿ ಶಾಸಕರ ಫೋಟೊ ಇಟ್ಟು ಕಾಂಗ್ರೆಸ್ನಿಂದ ವಿನೂತನ ಪ್ರತಿಭಟನೆ - Protest in Dharwad
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-8735663-843-8735663-1599635094510.jpg)
ರಸ್ತೆ ದುರಸ್ತಿಪಡಿಸುವಂತೆ ಆಗ್ರಹಿಸಿ, ಕೆಪಿಸಿಸಿ ಕಾರ್ಯದರ್ಶಿ ನಾಗರಾಜ್ ಗೌರಿ ಹಾಗೂ ದೀಪಾ ಗೌರಿ ನೇತೃತ್ವದಲ್ಲಿ ರಸ್ತೆ ಗುಂಡಿಯಲ್ಲಿ ಶಾಸಕರ ಫೋಟೋ ಇಟ್ಟು ವಿನೂತನವಾಗಿ ಪ್ರತಿಭಟನೆ ನಡೆಸಿದರು. ಧಾರವಾಡದ ಕುಸುಮ ನಗರದಲ್ಲಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಹದಗೆಟ್ಟ ರಸ್ತೆ ಗುಂಡಿಯಲ್ಲಿ ಶಾಸಕ ಅರವಿಂದ ಬೆಲ್ಲದ ಅವರ ಭಾವಚಿತ್ರ ಇಟ್ಟು ಆಕ್ರೋಶ ವ್ಯಕ್ತಪಡಿಸಿದರು. ಕಳೆದ 6 ತಿಂಗಳನಿಂದ ರಸ್ತೆ ಹದಗೆಟ್ಟಿದ್ದರೂ ಶಾಸಕ ಬೆಲ್ಲದ ಅವರು ಇತ್ತ ತಿರುಗಿಯೂ ನೋಡ್ತಿಲ್ಲ. ಇನ್ನಾದರೂ ಶಾಸಕರು ಎಚ್ಚೆತ್ತುಕೊಂಡು ರಸ್ತೆ ಮಾಡಿಸಬೇಕು ಎಂದು ಒತ್ತಾಯಿಸಿದರು.