'₹200 ಆದಾಗ ಸಿಲಿಂಡರ್‌ ಹೊತ್ಕೊಂಡಿದ್ದ ಸ್ಮೃತಿ ಇರಾನಿ, ₹745 ಆಗಿರೋ ಅದರ ಮೇಲೆ ಕೂತವರಾ..'

🎬 Watch Now: Feature Video

thumbnail

By

Published : Feb 14, 2021, 3:53 PM IST

ಬೆಲೆ ಏರಿಕೆ ಹಾಗೂ ಕೇಂದ್ರ, ರಾಜ್ಯ ಸರ್ಕಾರಗಳ ಆಡಳಿತ ವೈಖರಿ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಕೊಪ್ಪಳದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶಿವರಾಜ ತಂಗಡಗಿ ಹಾಗೂ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ನೇತೃತ್ವದಲ್ಲಿ ನಗರದ ಬನ್ನಿಕಟ್ಟೆ ಪ್ರದೇಶದಿಂದ ಅಶೋಕ ಸರ್ಕಲ್​​ವರೆಗೆ ಎತ್ತಿನಗಾಡಿಗಳ ಮೂಲಕ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಸಾಮಾನ್ಯ ಜನರು ತೊಂದರೆಗೆ ಸಿಲುಕಿದ್ದಾರೆ. ಆದರೆ, ಕೇಂದ್ರ ಸರ್ಕಾರ ಬೆಲೆ ಏರಿಕೆ ನಿಯಂತ್ರಿಸುವಲ್ಲಿ ವಿಫಲವಾಗಿದೆ ಎಂದು ದೂರಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.