ಧಾರವಾಡ: ಸಾಹುಕಾರನ ವಿರುದ್ಧ ಭುಗಿಲೆದ್ದ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ - Congress activits protest darwad news
🎬 Watch Now: Feature Video
ಧಾರವಾಡ: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ವಿವೇಕಾನಂದ ವೃತ್ತದಲ್ಲಿ ಟೈರ್ ದಹಿಸಿ ಪ್ರತಿಭಟನೆ ನಡೆಸಿದರು. ರಮೇಶ್ ಜಾರಕಿಹೊಳಿ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಬಗ್ಗೆ ಅಸಭ್ಯವಾಗಿ ಮಾತನಾಡಿದ್ದಾರೆ. ಜಾರಕಿಹೊಳಿ ಅವರದ್ದು ಎನ್ನಲಾದ ಸಿಡಿ ಪ್ರಕರಣದಲ್ಲಿ ಉದ್ದೇಶಪೂರ್ವಕವಾಗಿಯೇ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಎಳೆದು ತರಲಾಗುತ್ತಿದೆ ಎಂದು ಆರೋಪಿಸಿದರು.