ತಿಂಗಳ ನಂತರ ಮೈಕೊಡವಿ ಎದ್ದುನಿಂತ ಕೈ ನಾಯಕರು
🎬 Watch Now: Feature Video
ಮೈತ್ರಿ ಸರ್ಕಾರದ ಪತನದ ನಂತರ ಬಹುತೇಕ ನಿಷ್ಕ್ರಿಯವಾಗಿದ್ದ ಕಾಂಗ್ರೆಸ್ ಪಕ್ಷದ ನಾಯಕರು ಇಂದು ಹಠಾತ್ ಎಚ್ಚೆತ್ತುಕೊಂಡು ರಾಜ್ಯ ಹಾಗೂ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನಾ ಧರಣಿ ನಡೆಸಿದರು. ಬಹುತೇಕ ಎಲ್ಲ ನಾಯಕರು ಉಪಸ್ಥಿತರಿದ್ದು ಒಗ್ಗಟ್ಟು ಪ್ರದರ್ಶಿಸಿ, ನೆರೆ ಸಮಸ್ಯೆಯಿಂದ ನಲುಗಿರುವ ರಾಜ್ಯದಲ್ಲಿ ಪರಿಹಾರ ಕಾರ್ಯ ಸರಿಯಾದ ರೀತಿಯಲ್ಲಿ ನಡೆಯುತ್ತಿಲ್ಲ ಎಂದು ಆರೋಪಿಸಿದರು. ಬೆಳಗಿಂದ ಸಂಜೆಯವರೆಗೆ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ನಾಯಕರು ಸಂಜೆ ರಾಜ್ಯಪಾಲರನ್ನು ಭೇಟಿಯಾಗಿ ಮನವಿ ಕೂಡ ಸಲ್ಲಿಸಿದರು. ಇದರ ಸಂಪೂರ್ಣ ವಿವರ ಇಲ್ಲಿದೆ ನೋಡಿ.