ಒಟ್ಟಿಗೆ ಪ್ರಯಾಣಿಸಿದ ಟಗರು - ರಾಜಾಹುಲಿ: ಒಂದೇ ವಿಮಾನದಲ್ಲಿ ಕೈ-ಕಮಲ ನಾಯಕರು - ಯಡಿಯೂರಪ್ಪ ಮತ್ತು ಸಿದ್ದರಾಮಯ್ಯ ಒಂದೇ ವಿಮಾನದಲ್ಲಿ ಪ್ರಯಾಣ ಮಾಡಿದ್ದಾರೆ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-9778768-869-9778768-1607186028611.jpg)
ಆಡಳಿತ ಹಾಗೂ ಪ್ರತಿಪಕ್ಷದ ನಾಯಕರು ಒಂದೇ ವಿಮಾನದಲ್ಲಿ ಬೆಂಗಳೂರಿಗೆ ತೆರಳಿದ್ದಾರೆ. ಬಾಗಲಕೋಟೆಯಲ್ಲಿ ನಡೆದ ಕಾಂಗ್ರೆಸ್ ಪ್ರತಿಭಟನೆ ಮುಗಿದ ನಂತರ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಇನ್ನಿತರರು ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಇತ್ತ ಎರಡು ದಿನದ ಬೆಳಗಾವಿ ಪ್ರವಾಸ ಮುಗಿಸಿ ಸಿಎಂ ಬಿಎಸ್ ವೈ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಡಿಸಿಎಂ ಗೋವಿಂದ ಕಾರಜೋಳ, ಸಚಿವ ಆರ್ ಅಶೋಕ ಕೂಡ ಅದೇ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಉಭಯ ಪಕ್ಷದ ನಾಯಕರು ಮುಖಾಮುಖಿಯಾಗಿ ಉಭಯ ಕುಶಲೋಪರಿ ವಿಚಾರಿಸಿದರು. ನಂತ್ರ ಎರಡೂ ಪಕ್ಷದ ನಾಯಕರು ಒಂದೇ ವಿಮಾನದಲ್ಲಿ ಪ್ರಯಾಣ ಬೆಳೆಸಿದರು.
Last Updated : Dec 5, 2020, 10:40 PM IST
TAGGED:
Bgm