ನ.12 ರಂದು ಗುಮ್ಮಟ ನಗರಿಯಲ್ಲಿ ಕಾಂಗ್ರೆಸ್ ಬೃಹತ್​ ಸಮಾವೇಶ

By

Published : Nov 10, 2019, 9:12 PM IST

thumbnail
ವಿಜಯಪುರ: ನಗರದ ದರಬಾರ ಹೈಸ್ಕೂಲ್ ಮೈದಾನದಲ್ಲಿ‌ ನ.12 ರಂದು ಕೇಂದ್ರ ಸರ್ಕಾರದ ಜನ ವಿರೋಧಿ ಆರ್ಥಿಕ ನೀತಿಗಳನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರ ಬೃಹತ್​ ಸಮಾವೇಶ ಹಾಗೂ ನೂತನ‌ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣ ಸಮಾರಂಭ ನಡೆಯಲಿದೆ. ಸಮಾವೇಶದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್, ಮಾಜಿ ಸಚಿವ ಎಂ. ಬಿ. ಪಾಟೀಲ ಸೇರಿದಂತೆ ಅನೇಕ ಕಾಂಗ್ರೆಸ್ ಪಕ್ಷದ ಘಟಾನುಘಟಿ ನಾಯಕರು ಭಾಗಿಯಾಗಲಿದ್ದಾರೆ. ಜೊತೆಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ‌‌ ಕಾಂಗ್ರೆಸ್ ಕಾರ್ಯಕರ್ತರು‌ ಆಗಮಿಸಲಿದ್ದು‌, ದರಬಾರ್ ಹೈಸ್ಕೂಲ್ ಮೈದಾನದಲ್ಲಿ ವೇದಿಕೆ ಸಿದ್ದಗೊಂಡಿದೆ. ನಗರದ ಬಸವೇಶ್ವರ ವೃತ್ತ, ಗಾಂಧಿ ವೃತ್ತ ಸೇರಿದಂತೆ ದರಬಾರ ಮೈದಾನದ ಮುಂಭಾಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಕಟೌಟ್​ಗಳು ರಾರಾಜಿಸುತ್ತಿವೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.