ಮೇಕೆದಾಟು ಪಾದಯಾತ್ರೆಗೆ ಚಾಲನೆ ಬಳಿಕ ಸರ್ಕಾರದ ವಿರುದ್ಧ ಸಿದ್ದರಾಮಯ್ಯ, ಡಿಕೆಶಿ ವಾಗ್ದಾಳಿ - Congress Mekedatu Padayatra
🎬 Watch Now: Feature Video

ರಾಮನಗರ: ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ಇಂದಿನಿಂದ ಪಾದಯಾತ್ರೆ ಆರಂಭಿಸಿದೆ. ಇಂದಿನಿಂದ 11 ದಿನ ಪಾದಯಾತ್ರೆ ನಡೆಯಲಿದ್ದು, 165ಕ್ಕೂ ಹೆಚ್ಚು ಕಿಲೋ ಮೀಟರ್ ದೂರ ನಡೆಯಲು ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಟೀಂ ತಯಾರಾಗಿದೆ. ಸ್ವಾಮೀಜಿ, ಮೌಲ್ವಿ ಮತ್ತು ಪಾದ್ರಿಗಳು ಮೂರೂ ಧರ್ಮಗಳ ಧಾರ್ಮಿಕ ಮುಖಂಡರು ಗಿಡಗಳಿಗೆ ನೀರೆರೆಯುವ ಮೂಲಕ ಹಾಗೂ ನಗಾರಿ ಬಾರಿಸುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಡಿಕೆಶಿ, ಸಿದ್ದರಾಮಯ್ಯ ಅವರು, ಸರ್ಕಾರ ಈ ಪಾದಯಾತ್ರೆ ತಡೆಯಲು ಹಲವು ಪ್ರಯತ್ನಗಳನ್ನು ನಡೆಸಿದೆ ಎಂದು ವಾಗ್ದಾಳಿ ನಡೆಸಿದರು.