ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ ಅಧಿಕಾರ ಸ್ವೀಕಾರ: ಹರ್ಷಚಿತ್ತರಾದ ಮೈಸೂರು ಕಾಂಗ್ರೆಸಿಗರು - Congress Members watched DK Sivakumar swearing live program
🎬 Watch Now: Feature Video
ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಅವರ ಪಟ್ಟಾಭಿಷೇಕವಾಗುತ್ತಿದ್ದಂತೆ ಮೈಸೂರಿನಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಹರ್ಷಚಿತ್ತರಾಗಿದ್ದಾರೆ. ರೈಲ್ವೆ ನಿಲ್ದಾಣದ ಪಕ್ಕದಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಹಾಗೂ 7,831 ಸ್ಥಳಗಳಲ್ಲಿ ಎಲ್ಇಡಿ ಪರದೆ ಅಳವಡಿಸಿ ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪದಗ್ರಹಣ ಕಾರ್ಯಕ್ರಮವನ್ನು ವೀಕ್ಷಣೆ ಮಾಡಲಾಯಿತು. ಕಾಂಗ್ರೆಸ್ ಕಚೇರಿಯಲ್ಲಿ ವಿವಿಧ ಬ್ಲಾಕ್ಗಳ ಮುಖ್ಯಸ್ಥರು ದೀಪ ಬೆಳಗುವ ಮೂಲಕ ಪದಗ್ರಹಣ ನೇರ ವೀಕ್ಷಣೆ ಕಾರ್ಯಕ್ರಮವನ್ನು ಉದ್ಘಾಟಿಸಿದರು.