ಅಧಿವೇಶನದಲ್ಲಿ ಖಾಸಗಿ ಮಾಧ್ಯಮಗಳಿಗೆ ನಿರ್ಬಂಧ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ - ವಿಧಾನಸಭಾ ಅಧಿವೇಶನ
🎬 Watch Now: Feature Video
ಹುಬ್ಬಳ್ಳಿ: ವಿಧಾನಸಭಾ ಅಧಿವೇಶನಕ್ಕೆ ಖಾಸಗಿ ಸುದ್ದಿ ಮಾಧ್ಯಮ ಕ್ಯಾಮೆರಾಗಳನ್ನು ನಿರ್ಬಂಧಿಸಿರುವ ಸರ್ಕಾರದ ಕ್ರಮವನ್ನು ಖಂಡಿಸಿ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗವಾಗಿರುವ ಮಾಧ್ಯಮಕ್ಕೆ ಅಧಿವೇಶನದಲ್ಲಿ ನಿರ್ಬಂಧ ಹೇರಿರುವುದು ಖಂಡನೀಯವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಸಾರ್ವಜನಿಕ ಹಾಗೂ ಸರ್ಕಾರದ ನಡುವಿನ ಕೊಂಡಿಯಂತೆ ಕಾರ್ಯನಿರ್ವಹಿಸುವ ಮಾಧ್ಯಮಕ್ಕೆ ಈ ರೀತಿಯ ನಿರ್ಬಂಧ ಹೇರಿರುವುದು ಸರಿಯಲ್ಲ. ಕೂಡಲೇ ಈ ನಿರ್ಧಾರ ಕೈಬಿಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.