ಕೋಲಾರ: ಇಂಧನ ಬೆಲೆ ಏರಿಕೆ ಖಂಡಿಸಿ ಸೈಕಲ್ ಜಾಥಾ, ಪ್ರತಿಭಟನೆ
🎬 Watch Now: Feature Video
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕೋಲಾರ ಜಿಲ್ಲೆ ಬಂಗಾರಪೇಟೆ ಪಟ್ಟಣದ ಕುವೆಂಪು ವೃತ್ತದಿಂದ ತಹಶೀಲ್ದಾರ್ ಕಚೇರಿವರೆಗೂ ಸೈಕಲ್ ಜಾಥಾ ನಡೆಸುವ ಮೂಲಕ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಸರ್ಕಾರ ಕೊರೊನಾ ಆತಂಕದ ನಡುವೆಯೂ ಇಂಧನ ಬೆಲೆ ಏರಿಕೆ ಮಾಡಿ ಜನಸಾಮಾನ್ಯರಿಗೆ ಹಾಗೂ ರೈತಾಪಿ ವರ್ಗಕ್ಕೆ ಗಾಯದ ಮೇಲೆ ಬರೆ ಎಳೆಯುತ್ತಿದೆ ಎಂದು ಆರೋಪಿಸಿದ್ರು.