ತೈಲ ಬೆಲೆ ಏರಿಕೆ ಖಂಡಿಸಿ ಧಾರವಾಡದಲ್ಲಿ ಪ್ರತಿಭಟನೆ... ಸೈಕಲ್ ಮೂಲಕ ಮೆರವಣಿಗೆ - darwad protest news
🎬 Watch Now: Feature Video
ಧಾರವಾಡ: ದಿನದಿಂದ ದಿನಕ್ಕೆ ತೈಲ ಬೆಲೆ ಏರಿಕೆ ಖಂಡಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮಾಧ್ಯಮ ವಿಶ್ಲೇಷಕ ಪಿ.ಹೆಚ್. ನೀರಲಕೇರಿ ನೇತೃತ್ವದಲ್ಲಿ ಸೈಕಲ್ ಮೂಲಕ ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಿದರು. ನಗರದ ಜ್ಯೋತಿ ತಾಲೀಮು ಆವರಣದಿಂದ ಪ್ರಾರಂಭವಾದ ಸೈಕಲ್ ರ‍್ಯಾಲಿಯು ನಗರದ ಪ್ರಮುಖ ವೃತ್ತಗಳ ಮೂಲಕ ಜಿಲ್ಲಾಧಿಕಾರಿ ಕಚೇರಿ ತಲುಪಿತು. ಈ ವೇಳೆ ಕಾಂಗ್ರೆಸ್ ಮುಖಂಡರು ಜಿಲ್ಲಾಧಿಕಾರಿ ದೀಪಾ ಚೋಳನ್ ಅವರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.