ರಮೇಶ್ ಜಾರಕಿಹೊಳಿ ವಿರುದ್ಧ ಮೈಸೂರಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ - Ramesh jarkiholi
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-11201728-13-11201728-1617009441729.jpg)
ಮೈಸೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಪ್ರಕರಣ ದಾಖಲಾಗಿದ್ದರೂ ಅವರನ್ನು ಬಂಧಿಸುವ ಬದಲು ಸರ್ಕಾರವೇ ರಕ್ಷಣೆಗೆ ನಿಂತಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಡಿ.ಕೆ. ಶಿವಕುಮಾರ್ ಅವರ ಅಭಿಮಾನಿಗಳು ಕಾಂಗ್ರೆಸ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ್ದಾರೆ. ರಮೇಶ್ ಜಾರಕಿಹೊಳಿ ಅವರು ಡಿ ಕೆ ಶಿವಕುಮಾರ್ ವಿರುದ್ಧ ಅವಾಚ್ಯ ಶಬ್ದ ಬಳಸಿ ನಿಂದಿಸಿದ್ದಾರೆ. ಇಷ್ಟಾದರೂ ರಮೇಶ್ ಜಾರಕಿಹೊಳಿಯನ್ನು ಬಂಧಿಸದೇ ಸರ್ಕಾರ ಅವರ ಬೆಂಬಲಕ್ಕೆ ನಿಂತಿದೆ ಎಂದು ಕಿಡಿಕಾರಿದರು.