ಚಿಕ್ಕಮಗಳೂರಿನಲ್ಲಿ ಮುಂದುವರೆದ ಮಳೆ: ಜನರ ಪರದಾಟ - ಮುಳ್ಳಯ್ಯನ ಗಿರಿ
🎬 Watch Now: Feature Video

ಕಳೆದ ಒಂದು ವಾರದಿಂದ ಚಿಕ್ಕಮಗಳೂರು ನಗರ ಪ್ರದೇಶದಲ್ಲಿ ಬಿಟ್ಟು ಬಿಟ್ಟು ಮಳೆ ಸುರಿಯುತ್ತಿದ್ದು, ಜಿಲ್ಲೆಯ ಮಲೆನಾಡು ಭಾಗ ಹಾಗೂ ಘಟ್ಟ ಪ್ರದೇಶದ ಭಾಗದಲ್ಲಿ ನಿರಂತರ ಮಳೆಯಾಗುತ್ತಿತ್ತು. ಆದರೆ ಇಂದು ಬೆಳಗ್ಗಿನಿಂದ ನಗರ ಪ್ರದೇಶದಲ್ಲಿ ಮೋಡ ಕವಿದ ವಾತವರಣವಿದ್ದು, ಒಂದು ಗಂಟೆಯಿಂದ ನಿರಂತರ ಮಳೆ ಸುರಿಯುತ್ತಿದೆ. ಮೂಡಿಗೆರೆ, ಕೊಪ್ಪ, ಬಾಳೆಹೊನ್ನೂರು, ಚಾರ್ಮಾಡಿ ಘಾಟ್, ಮುಳ್ಳಯ್ಯನ ಗಿರಿ, ಸೀತಾಳಯ್ಯನ ಗಿರಿ ಭಾಗದಲ್ಲಿಯೂ ನಿರಂತರ ಮಳೆಯಾಗುತ್ತಿದ್ದು, ನಗರ ಹಾಗೂ ಮಲೆನಾಡು ಭಾಗದಲ್ಲಿ ವಾಹನ ಸಂಚಾರರು ಪರದಾಟ ನಡೆಸುತ್ತಿದ್ದಾರೆ.