ಮಲೆನಾಡಿನಲ್ಲಿ ಮುಂದುವರಿದ ಮಳೆ ಆರ್ಭಟ: ಜನಜೀವನ ಸಂಪೂರ್ಣ ಅಸ್ತವ್ಯಸ್ತ - ಮಲೆನಾಡಿನಲ್ಲಿ ಮುಂದುವರಿದ ಮಳೆ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-4857811-thumbnail-3x2-ckm.jpg)
ಚಿಕ್ಕಮಗಳೂರು : ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಕಂಡಿರುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಧಾರಕಾರ ಮಳೆ ಪ್ರಾರಂಭವಾಗಿದೆ. ಜಿಲ್ಲೆಯ ಮಲೆನಾಡು ಭಾಗದಲ್ಲಿ ಬಿಟ್ಟೂ ಬಿಡದೇ ಮಳೆಯಾಗುತ್ತಿದ್ದು ಮಲೆನಾಡಿನ ಜನರು ಈ ಮಳೆಗೆ ಹೈರಾಣಾಗಿ ಹೋಗಿದ್ದಾರೆ. ಮಳೆಯಿಂದ ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ಪ್ರಮುಖವಾಗಿ ಚಿಕ್ಕಮಗಳೂರು ನಗರ, ಬಣಕಲ್, ಕೊಟ್ಟಿಗೆಹಾರ, ಜಾವಳಿ, ಸುಂದರಬೈಲು, ಜಯಪುರ ಸೇರಿದಂತೆ ಮುತ್ತ ಮುತ್ತಲ ಭಾಗದಲ್ಲಿ ಧಾರಕಾರ ಮಳೆಯಾಗುತ್ತಿದೆ.