ಭಗತ್ ಸಿಂಗ್ ಯೂತ್ ಕ್ಲಬ್ ಯುವಕರಿಂದ ಕೊರೊನಾ ಜಾಗೃತಿ - Bhagat Singh Youth Club
🎬 Watch Now: Feature Video
ಹುಬ್ಬಳ್ಳಿ: ಕೋವಿಡ್-19 ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ನಗರದ ಭಗತ್ ಸಿಂಗ್ ಯೂತ್ ಕ್ಲಬ್ ನ ಯುವಕರು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಹು-ಧಾ ವಿಧಾನಸಭಾ ಕ್ಷೇತ್ರದ ವಾರ್ಡ್ ನಂ 50 ರಲ್ಲಿನ ಮಂಟೂರ ರಸ್ತೆ, ಕೃಪಾ ನಗರ, ಶಾ ಕಾಲೋನಿ, ಅಂಬೇಡ್ಕರ್ ಕಾಲೋನಿ ಸೇರಿದಂತೆ ಮುಂತಾದ ಪ್ರದೇಶಗಳಲ್ಲಿ ಸಂಚರಿಸಿ ಕೊರೊನಾ ವೈರಸ್ ಸೋಂಕು ಭಯಾನಕ ರೋಗವಲ್ಲ. ಯಾರೂ ಭಯಪಡುವ ಅವಶ್ಯಕತೆ ಇಲ್ಲ. ಆದರೆ, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ವಹಿಸಿದರೇ ಸಾಕು. ಕಡ್ಡಾಯವಾಗಿ ಮಾಸ್ಕ್, ಸ್ಯಾನಿಟೈಸರ್ ಬಳಕೆ ಮಾಡುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮಾಡಬೇಕು ಎಂದು ಜನ ಜಾಗೃತಿ ಮೂಡಿಸುತ್ತಿದ್ದಾರೆ.