ಐಎಲ್ಐ, ಉಸಿರಾಟ ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳಲ್ಲೂ ಕೊರೊನಾ - ದಾವಣಗೆರೆ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-7886806-657-7886806-1593844017143.jpg)
ದಾವಣಗೆರೆಯಲ್ಲಿ ಐಎಲ್ಐ ಹಾಗೂ ತೀವ್ರ ಉಸಿರಾಟದಿಂದ ಬಳಲುತ್ತಿರುವ ರೋಗಿಗಳಲ್ಲಿ ಕೊರೊನಾ ಸೋಂಕು ದೃಢಪಡುತ್ತಿರುವುದು ಜನರಲ್ಲಿ ಆತಂಕವನ್ನ ಹೆಚ್ಚಿಸಿದೆ. ಕಳೆದ ನಾಲ್ಕೈದು ದಿನಗಳಲ್ಲಿ ಇಂತಹ ಗುಣಲಕ್ಷಣಗಳಿದ್ದವರಲ್ಲಿ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ನಿನ್ನೆ 5 ಮಂದಿಗೆ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 338ಕ್ಕೇರಿದೆ. ಇದುವರೆಗೆ 9 ಮಂದಿ ಸೋಂಕಿಗೆ ಬಲಿಯಾಗಿದ್ದು, 48 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ ಮೂವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಖಾಸಗಿ ಆಸ್ಪತ್ರೆ ಹಾಗೂ ಕ್ಲಿನಿಕ್ಗಳು ಸಾರಿ ಹಾಗೂ ಐಎಲ್ಐ ರೋಗಿಗಳ ಬಗ್ಗೆ ಕಡ್ಡಾಯವಾಗಿ ಮಾಹಿತಿ ನೀಡಲೇಬೇಕು ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ. ಪದೇ ಪದೆ ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಅನಿವಾರ್ಯ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ಎಚ್ಚರಿಕೆ ನೀಡಿದ್ದಾರೆ.