ಕೊರೊನಾ ಸೋಂಕಿನ ಲಕ್ಷಣ: ರಾಣೆಬೆನ್ನೂರಿನ ಮಾರುತಿ ನಗರ ಸಂಪೂರ್ಣ ಬಂದ್ - corona effect in ranebennuru
🎬 Watch Now: Feature Video
ಮಹಿಳೆಯೊಬ್ಬರಿಗೆ ಕೊರೊನಾ ಸೋಂಕು ಲಕ್ಷಣ ಕಂಡು ಬಂದ ಹಿನ್ನೆಲೆ ರಾಣೆಬೆನ್ನೂರಿನ ಮಾರುತಿ ನಗರವನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಮಹಿಳೆಯನ್ನು ಹಾವೇರಿ ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದ್ದು, ಮಹಿಳೆಯ ಗಂಟಲ ದ್ರವವನ್ನು ಸಂಗ್ರಹಿಸಿ ಶಿವಮೊಗ್ಗ ಲ್ಯಾಬ್ಗೆ ಕಳುಹಿಸಲಾಗಿದೆ ಎನ್ನಲಾಗಿದೆ. ಮುಂಜಾಗ್ರತಾ ಕ್ರಮವಾಗಿ ತಾಲೂಕು ಆಡಳಿತ ಮತ್ತು ಪೊಲೀಸ್ ಇಲಾಖೆಯು, ಮಾರುತಿ ನಗರವನ್ನು ಸಂಪೂರ್ಣವಾಗಿ ಬ್ಯಾರಿಕೇಡ್ ಹಾಕುವ ಮೂಲಕ ಸೂಕ್ತ ಭದ್ರತೆ ಒದಗಿಸಲಾಗಿದೆ.