ಬ್ಯಾಡಗಿ ಪಟ್ಟಣದಲ್ಲಿ ಕೊರೊನಾ ನಿಯಂತ್ರಣಕ್ಕೆ ಔಷಧ ಸಿಂಪಡಣೆ - medicine spray Badagi town

🎬 Watch Now: Feature Video

thumbnail

By

Published : Mar 25, 2020, 11:56 PM IST

ಹಾವೇರಿ: ಜಿಲ್ಲೆಯ ಬ್ಯಾಡಗಿ ಪಟ್ಟಣದಲ್ಲಿ ಕೊರೊನಾ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪುರಸಭೆ ಪ್ರದೇಶದಲ್ಲಿ ಅಗ್ನಿಶಾಮಕದ ವಾಹನದಲ್ಲಿ ಔಷಧವನ್ನು ಬೆರೆಸಿ ಪಟ್ಟಣದಾದ್ಯಂತ ಸಿಂಪಡಿಸಲಾಯಿತು. ಪುರಸಭೆ ವತಿಯಿಂದ ಪಟ್ಟಣದಲ್ಲಿ ಸ್ವಚ್ಛತೆ ಪಾಲನೆಗೆ ಮೊದಲ ಆದ್ಯತೆ ನೀಡಲಾಗಿದೆ. ಕೊರೊನಾ ವೈರಸ್‌ ತಡೆಗೆ ಪೂರಕವಾದ ಎಲ್ಲ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ಸಿಂಪಡಣಾ ಕಾರ್ಯ ಪ್ರಾರಂಭಿಸಲಾಗಿದೆ. ಇದಕ್ಕೆ ಅಗತ್ಯವಾದ ವಾಹನ ಹಾಗೂ ಸಲಕರಣೆಗಳನ್ನು ಸಿದ್ಧವಾಗಿಡಲಾಗಿದೆ. ಪುರಸಭೆಯ ಮುಖ್ಯಾಧಿಕಾರಿ ವಿರುಪಾಕ್ಷಿ ಎಂ.ಪೂಜಾರ ಅವರು ಪಟ್ಟಣದ ನಾಗರಿಕರು ಹಾಗೂ ಇಲ್ಲಿಗೆ ಬಂದು ಹೋಗುವ ಜನರು ಕೊರೊನಾ ನಿಯಂತ್ರಣಕ್ಕೆ ವಿಧಿಸಿರುವ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಗುಂಪಾಗಿ ಓಡಾಡುವುದನ್ನು ನಿಲ್ಲಿಸಬೇಕು. ಆರೋಗ್ಯ ಇಲಾಖೆ ಮಾಡಿರುವ ಸಲಹೆ ಹಾಗೂ ಸೂಚನೆಗಳನ್ನು ತಪ್ಪದೇ ಅನುಸರಿಸಬೇಕು ಎಂದು ಸಲಹೆ ನೀಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.