thumbnail

By

Published : Mar 19, 2020, 2:17 PM IST

ETV Bharat / Videos

ಕೊರೊನಾ ಕರಿಛಾಯೆ: ಸಿದ್ದಗಂಗಾ ಮಠದಲ್ಲಿ ವಿದ್ಯಾರ್ಥಿ, ಸ್ವಾಮೀಜಿಗೆ ಥರ್ಮಲ್ ಸ್ಕ್ರೀನಿಂಗ್​

ತುಮಕೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡುವಿಕೆಯನ್ನು ತಡೆಯಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅದರಲ್ಲೂ ಮುಖ್ಯವಾಗಿ ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಸ್ವಚ್ಛತೆಗೆ ಹೆಚ್ಚು ಗಮನ ಹರಿಸಲಾಗಿದ್ದು,ಮಠಕ್ಕೆ ಬರುವ ಭಕ್ತಾದಿಗಳಿಗೆ ಹಾಗೂ ಮಠದ ವಿದ್ಯಾರ್ಥಿಗಳನ್ನು ಥರ್ಮಲ್ ಸ್ಕ್ಯಾನರ್ ಮೂಲಕ ಪರೀಕ್ಷಿಸಲಾಗುತ್ತಿದೆ. ಮಠದಲ್ಲಿ ಇಬ್ಬರು ವೈದ್ಯಕೀಯ ಸಿಬ್ಬಂದಿ ಪರೀಕ್ಷೆ ನಡೆಸುತ್ತಿದ್ದಾರೆ. ಈ ನಡುವೆ ಸಿದ್ದಲಿಂಗ ಸ್ವಾಮೀಜಿ ಅವರಿಗೂ ವೈದ್ಯಕೀಯ ಸಿಬ್ಬಂದಿ ಥರ್ಮಲ್ ಸ್ಕ್ಯಾನರ್ ಮೂಲಕ ಪರೀಕ್ಷೆ ಮಾಡಿದರು. ಈಗಾಗಲೇ ಸಿದ್ದಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಅವರು ಮಠದಲ್ಲಿ ಸ್ವಚ್ಛತೆಗೆ ಹೆಚ್ಚಿನ ಗಮನ ಹರಿಸಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.