ತುಮಕೂರು: ಕೊರೊನಾ ಸೋಂಕಿನಿಂದ ಗುಣಮುಖರಾಗಿ ಕೆಲಸಕ್ಕೆ ಹಾಜರಾದ ಪೊಲೀಸರಿಗೆ ಸನ್ಮಾನ - ಕೊರೊನಾ ಸೋಂಕಿನಿಂದ ಗುಣಮುಖ
🎬 Watch Now: Feature Video
ಕೋವಿಡ್ ವಾರಿಯರ್ಸ್ ಆಗಿ ಕೆಲಸ ಮಾಡುವ ವೇಳೆ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿ ಕರ್ತವ್ಯ ನಿರ್ವಹಿಸುತ್ತಿರೋ ಪೊಲೀಸ್ ಸಿಬ್ಬಂದಿಯನ್ನು ಇಂದು ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಸನ್ಮಾನಿಸಲಾಯಿತು. ತುಮಕೂರು ನಗರ ಉಪ ವಿಭಾಗದ 20 ಮಂದಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು 74ನೇ ಸ್ವಾತಂತ್ರ್ಯೋತ್ಸವ ಸಮಾರಂಭದ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿ ಕೃಷ್ಣ ಸನ್ಮಾನಿಸಿದರು.