ಚಿಕ್ಕಮಗಳೂರಲ್ಲಿ ಇಂದು ಒಂದು ಕೊರೊನಾ ಕೇಸ್​ ಪತ್ತೆ: ಸೋಂಕಿತರ ಸಂಖ್ಯೆ 81ಕ್ಕೆ ಏರಿಕೆ

By

Published : Jul 2, 2020, 3:41 PM IST

thumbnail
ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು ಒಬ್ಬರಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 81ಕ್ಕೆ ಏರಿಕೆಯಾಗಿದೆ. ಈವರೆಗೂ 41 ಜನ ಸೋಂಕಿತರು ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ತರೀಕೆರೆ ತಾಲೂಕಿನ ಅಜ್ಜಂಪುರ ಮೂಲದ ಓರ್ವ ವಯೋವೃದ್ಧೆ ವೈರಸ್​ಗೆ ತುತ್ತಾಗಿ ಸಾವನ್ನಪ್ಪಿದ್ದಾರೆ. ಸೋಂಕಿತ ವಾಸ ಮಾಡುತ್ತಿದ್ದ ಏರಿಯಾವನ್ನು ಪೊಲೀಸರು ಹಾಗೂ ಆರೋಗ್ಯ ಇಲಾಖೆ ಸೀಲ್ ​ಡೌನ್ ಮಾಡಿ ಕಟ್ಟೆಚ್ಚರ ವಹಿಸಿದೆ. ಸೋಂಕಿತನನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡುತ್ತಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 81ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು 39 ಸಕ್ರಿಯ ಪ್ರಕರಣಗಳಿವೆ. ಈ ಕುರಿತು ನಮ್ಮ ಪ್ರತಿನಿಧಿ ಜಿಲ್ಲಾ ಕೋವಿಡ್-19 ಆಸ್ಪತ್ರೆಯ ಮುಂಭಾಗದಿಂದ ನಡೆಸಿದ ಪ್ರತ್ಯಕ್ಷ ವರದಿ ಇಲ್ಲಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.