ಬಾಗಲಕೋಟೆಯಲ್ಲಿ ಕೊರೊನಾ ಯೋಧರಿಗೆ ಕೊರೊನಾ ಲಸಿಕೆ - ಕೊರೊನಾ ವಾರಿಯರ್ಸ್ಗೆ ಕೋವ್ಯಾಕ್ಸಿನ್ ಸುದ್ದಿ
🎬 Watch Now: Feature Video
ಕೋವಿಡ್ - 19 ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಬಾಗಲಕೋಟೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಿವಯೋಗಿ ಕಳಸದ ಅವರಿಂದ ಚಾಲನೆ ದೊರೆಯಿತು. ಕುಮಾರೇಶ್ವರ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಸ್ಥಾಪಿಸಲಾದ ಮಾದರಿ ಕೋವಿಡ್-19 ಕೇಂದ್ರದಲ್ಲಿ ಕೋವ್ಯಾಕ್ಸಿನ್ ನೀಡಿಕೆ ಆರಂಭವಾಯ್ತು. ನವನಗರದ ನಗರ ಆರೋಗ್ಯ ಪ್ರಾಥಮಿಕ ಕೇಂದ್ರದಲ್ಲಿ ಸ್ಥಾಪಿಸಲಾದ ಕೋವಿಡ್-19 ಮಾದರಿ ಲಸಿಕಾ ಕೇಂದ್ರದಲ್ಲಿ ಡಿ ಗ್ರೂಪ್ ಸಿಬ್ಬಂದಿ ಕಪಿಲ ಗಂಜಿಹಾಳ ಪ್ರಥಮವಾಗಿ ಕೊರೊನಾ ಲಸಿಕೆ ಹಾಕಿಸಿಕೊಂಡ್ರು. ಕಾರ್ಯಕ್ರಮದಲ್ಲಿ ಶಾಸಕ ವೀರಣ್ಣ ಚರಂತಿಮಠ, ಜಿಲ್ಲಾಧಿಕಾರಿ ಕ್ಯಾಪ್ಟನ್ ರಾಜೇಂದ್ರ, ಜಿ.ಪಂ ಸಿಇಒ ಟಿ.ಭೂಬಾಲನ್, ಎಸಿ ಎಂ.ಗಂಗಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎ.ಎನ್.ದೇಸಾಯಿ, ಆರ್.ಸಿ.ಎಚ್ ಅಧಿಕಾರಿ ಬಿ.ಜಿ.ಹುಬ್ಬಳ್ಳಿ ಸೇರಿದಂತೆ ಇತರರು ಉಪಸ್ಥಿತರಿದ್ದರು.