ಚಾಮುಂಡಿ ಬೆಟ್ಟಕ್ಕೂ ತಟ್ಟಿದ ಕೊರೊನಾ ಎಫೆಕ್ಟ್.. ದೇವಸ್ಥಾನಕ್ಕೆ ಬರುವ ಭಕ್ತರ ಸಂಖ್ಯೆಯಲ್ಲಿ ಇಳಿಮುಖ - ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರ ಸಂಖ್ಯೆಯಲ್ಲಿ ಇಳಿಮುಖ
🎬 Watch Now: Feature Video

ಮೈಸೂರು: ಮಾರಣಾಂತಿಕ ವೈರಸ್ ಕೊರೊನಾ ಭೀತಿಯ ಹಿನ್ನೆಲೆ, ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರ ಸಂಖ್ಯೆಯಲ್ಲಿ ಸ್ವಲ್ಪ ಇಳಿಮುಖವಾಗಿದೆ. ಕೇರಳ, ತಮಿಳುನಾಡು ಹಾಗೂ ಇತರ ರಾಜ್ಯಗಳಿಂದ ಶ್ರೀಚಾಮುಂಡಿ ತಾಯಿ ದರ್ಶನಕ್ಕೆ ಬರುವ ಭಕ್ತರ ಸಂಖ್ಯೆ ಕಡಿಮೆಯಾಗಿದೆ. ದೇವಸ್ಥಾನದ ಆವರಣದಲ್ಲಿ ಕೊರೊನಾ ವೈರಸ್ ಬಗ್ಗೆ ಜಾಗೃತಿ ಮೂಡಿಸುವ ಫ್ಲೆಕ್ಸ್ಗಳನ್ನು ಹಾಕಲಾಗಿದ್ದು, ಕೊರೋನಾ ಬಗ್ಗೆ ಭೀತಿ ಬೇಡ, ಮುನ್ನೆಚ್ಚರಿಕೆ ಇರಲಿ ಎಂದು ಜಾಗೃತಿ ಮೂಡಿಸಲಾಗುತ್ತಿದೆ.