ಕೊರೊನಾ ವೈರಸ್ ಹರಡದಂತೆ ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ ಶಾಸಕರ ತಾಕೀತು - ದೇಶಾದ್ಯಂತ ಲಾಕ್ಡೌನ್
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-6600275-559-6600275-1585584416539.jpg)
ಹಾವೇರಿ: ಕೊರೊನಾ ವೈರಸ್ ಹರಡುವ ಭೀತಿ ಹಿನ್ನೆಲೆಯಲ್ಲಿ ಹಾವೇರಿ ಶಾಸಕ ನೆಹರೂ ಓಲೇಕಾರ್ ಅವರು ಸೋಮವಾರ ನಗರಸಭೆ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಜಿಲ್ಲೆಯ ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು. ಈ ವೇಳೆ ಕೊರೊನಾ ವೈರಸ್ ಪರಿಸ್ಥಿತಿ ಮತ್ತು ಕೈಗೊಂಡ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಯಾವುದೇ ಕಾರಣಕ್ಕೂ ಜಿಲ್ಲೆಗೆ ವೈರಸ್ ಹರಡದಂತೆ ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.