ದ.ಕನ್ನಡ ಜಿಲ್ಲೆಯಲ್ಲಿ ಏಕಾಏಕಿ ಹೆಚ್ಚಿದ ಕೊರೊನಾ ಪ್ರಕರಣ: ಆತಂಕದಲ್ಲಿ ಜನತೆ - ದ.ಕ ಜಿಲ್ಲೆ ಕೋವಿಡ್ ಅಪ್ಡೇಟ್
🎬 Watch Now: Feature Video
ಮಂಗಳೂರು: ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಳವಾಗುತ್ತಿರುವುದು ಜನರ ಆತಂಕಕ್ಕೆ ಕಾರಣವಾಗಿದೆ. ಏಳು ದಿನದ ಮಗು, 1, 4,5 ಮತ್ತು 3 ವರ್ಷದ ಇಬ್ಬರು ಮಕ್ಕಳು ಸೇರಿ ನಿನ್ನೆ ಒಂದೇ ದಿನ 183 ಜನರಿಗೆ ಸೋಂಕು ತಗುಲಿದ್ದು, ಇದು ಈವರೆಗೆ ಒಂದು ದಿನದಲ್ಲಿ ಪತ್ತೆಯಾದ ಅತಿ ಹೆಚ್ಚು ಸೋಂಕಿತರ ಸಂಖ್ಯೆ ಆಗಿದೆ. ನಿನ್ನೆ 12 ಮಂದಿ ಗುಣಮುಖರಾಗಿದ್ದು, ಇದುವರೆಗೆ 1,542 ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ 28 ಮಂದಿ ಮೃತಪಟ್ಟಿದ್ದು, 695 ಮಂದಿ ಗುಣಮುಖರಾಗಿದ್ದಾರೆ. ಇನ್ನೂ 819 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.