ಆರ್.ಆರ್. ನಗರ ಉಪಚುನಾವಣೆ: ಮತಗಟ್ಟೆಗಳಲ್ಲಿ ಕೋವಿಡ್ ನಿಯಮ ಉಲ್ಲಂಘನೆ - ಆರ್. ಆರ್ ನಗರದಲ್ಲಿ ಮತದಾನ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-9410607-thumbnail-3x2-hrss.jpg)
ಬೆಂಗಳೂರು: ಕೋವಿಡ್ ಬಿಕ್ಕಟ್ಟಿನ ನಡುವೆ ಚುನಾವಣೆ ನಡೆಯುತ್ತಿರುವ ಹಿನ್ನೆಲೆ, ಮಾರ್ಗಸೂಚಿ ಪ್ರಕಾರ ಸಾಕಷ್ಟು ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಆದರೂ ಕೆಲವೊಂದು ಮತಗಟ್ಟೆಗಳಲ್ಲಿ ಮತದಾರರು ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿದ್ದಾರೆ. ಆರ್.ಆರ್. ನಗರ ಕ್ಷೇತ್ರ ವ್ಯಾಪ್ತಿಯ ಲಗ್ಗೆರೆ ಮತಗಟ್ಟೆಯ ಬಳಿ, ಮತದಾರರು ಮತ್ತು ಪಕ್ಷಗಳ ಕಾರ್ಯಕರ್ತರು ಗುಂಪು ಗುಂಪಾಗಿ ನಿಂತು ಸಾಮಾಜಿಕ ಅಂತರ ಉಲ್ಲಂಘಿಸಿರುವ ದೃಶ್ಯಗಳು ಕಂಡು ಬಂದಿವೆ. ಅಲ್ಲದೆ ಕೆಲವರು ಮಾಸ್ಕ್ ಕೂಡ ಧರಿಸಿರಲಿಲ್ಲ.