ಗೋಪೂಜೆ ಮಾಡಿ ವಿಧೇಯಕ ಸ್ವಾಗತಿಸಿದ ಬಿಜೆಪಿ ಕಾರ್ಯಕರ್ತರು - cow slaughter amendment bill
🎬 Watch Now: Feature Video
ಕೊಪ್ಪಳ: ರಾಜ್ಯ ಸರ್ಕಾರ ಗೋಹತ್ಯೆ ನಿಷೇಧ ವಿಧೇಯಕವನ್ನು ಮಂಡಿಸಿದ ಹಿನ್ನೆಲೆ, ಬಿಜೆಪಿ ಕಾರ್ಯಕರ್ತರು ನಗರದ ಶ್ರೀ ಸಿರಸಪ್ಪಯ್ಯಸ್ವಾಮಿ ಮಠದ ಬಳಿಯಿರುವ ಮಹಾವೀರ ಜೈನ ಗೋಶಾಲೆಯಲ್ಲಿ ಗೋವುಗಳಿಗೆ ಪೂಜೆ ಸಲ್ಲಿಸಿಸುವ ಮೂಲಕ ಸಂಭ್ರಮಾಚರಣೆ ನಡೆಸಿದರು. ಜೊತೆಗೆ ಗೋವುಗಳಿಗೆ ಅಕ್ಕಿ, ಬೆಲ್ಲವನ್ನು ತಿನ್ನಿಸುವ ಮೂಲಕ ಸರ್ಕಾರದ ಪರವಾಗಿ ಘೋಷಣೆ ಹಾಕಿದರು. ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾಗಬೇಕು ಎಂಬ ಜನರ ಭಾವನೆಗೆ ಸರ್ಕಾರ ಸ್ಪಂದಿಸಿ ಐತಿಹಾಸಿಕ ನಿರ್ಧಾರ ತೆಗೆದುಕೊಂಡಿದೆ ಎಂದು ಸಂತಸ ವ್ಯಕ್ತಪಡಿಸಿದರು.