ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸಿದ ಶಾಸಕ ಬಸವರಾಜ ದಡೇಸೂಗೂರು - ಮಕ್ಕಳ ಸರ್ವತೋಮುಖ ಬೆಳವಣಿಗೆ
🎬 Watch Now: Feature Video
ಕೊಪ್ಪಳ: ಗಂಗಾವತಿ ತಾಲೂಕಿನ ಜಂಗಮರ ಕಲ್ಗುಡಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಬಸವರಾಜ ದಡೇಸೂಗೂರು ಅವರು 8ನೇ ತರಗತಿಯ 52 ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಣೆ ಮಾಡಿದರು. ಗ್ರಾಮದ ಅಭಿವೃದ್ಧಿಗಾಗಿ ಈಗಾಗಲೇ ಹಲವಾರು ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗಿದೆ. ಇಲ್ಲಿನ ಶಾಲೆಗೆ ಕೊಠಡಿ ಹಾಗೂ ಮೂಲಸೌಕರ್ಯಗಳು ಅಗತ್ಯವಿರುವ ಬಗ್ಗೆ ಗ್ರಾಮಸ್ಥರು ಗಮನಕ್ಕೆ ತಂದಿದ್ದಾರೆ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಒಟ್ಟಾಗಿ ಕೆಲಸ ನಿರ್ವಹಿಸಿದರೆ, ಶಾಲೆ ಹಾಗೂ ಗ್ರಾಮ ಪ್ರಗತಿ ಕಾಣುತ್ತವೆ ಎಂದು ಶಾಸಕರು ಅಭಿಪ್ರಾಯಪಟ್ಟರು.