ಅಂಗಡಿ ಮುಂದೆ ನಿಲ್ಲಿಸಿದ್ದ ಸೈಕಲ್ ಕಳ್ಳತನ.. ಸಿಸಿಟಿವಿಯಲ್ಲಿ ದೃಶ್ಯ ಸೆರೆ - ತುಮಕೂರು ಸುದ್ದಿ
🎬 Watch Now: Feature Video

ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ಪಟ್ಟಣದ ಅಂಗಡಿ ಮುಂದೆ ನಿಲ್ಲಿಸಿದ್ದ ಸೈಕಲ್ ಕಳ್ಳತನವಾಗಿದೆ. ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪಟ್ಟಣದ ನೆಹರು ವೃತ್ತದ ಬಳಿ ಈ ಘಟನೆ ನಡೆದಿದೆ. ವ್ಯಕ್ತಿಯೊಬ್ಬ ಅನುಮಾನಸ್ಪದವಾಗಿ ಓಡಾಡುತ್ತಿರುವುದು ಮತ್ತು ನಿಲ್ಲಿಸಿದ್ದ ಸೈಕಲ್ನ ಲಾಕ್ ಮಾಡಿಲ್ಲ ಎಂಬುದನ್ನು ಖಚಿತಪಡಿಸಿಕೊಂಡು ಕಳ್ಳತನ ಮಾಡಿ ಪರಾರಿಯಾಗಿರುವ ದೃಶ್ಯದಲ್ಲಿದೆ.