ಕೆಪಿಸಿಸಿ ಅಧ್ಯಕ್ಷರಾಗಿ ಇಂದು ಡಿ.ಕೆ.ಶಿವಕುಮಾರ್ ಪದಗ್ರಹಣ: ವಿಶೇಷ ಪೂಜೆ - ಶಿವಕುಮಾರ್ ಪದಗ್ರಹಣ ಕಾರ್ಯಕ್ರಮ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-7856167-thumbnail-3x2-newssss.jpg)
ಬೆಂಗಳೂರು: ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮ ಹಿನ್ನೆಲೆಯಲ್ಲಿ ಸದಾಶಿವನಗರದ ಅವರ ನಿವಾಸದಲ್ಲಿ ಗಾಳಿ ಆಂಜನೇಯ ಸ್ವಾಮಿ ದೇಗುಲ ಅರ್ಚಕರಿಂದ ವಿಶೇಷ ಪೂಜೆ ನಡೆಯುತ್ತಿದೆ. ಮನೆಯ ಪೂಜೆ ಬಳಿಕ ಗಣೇಶನ ದೇಗುಲಕ್ಕೆ ಡಿಕೆಶಿ ಭೇಟಿ ನೀಡಲಿದ್ದಾರೆ. ಇದಾದ ಮೇಲೆ, ಕೆಪಿಸಿಸಿ ಕಚೇರಿಗೆ ತೆರಳಿ ಅವರು ಪದಗ್ರಹಣ ಸ್ವೀಕರಿಸಲಿದ್ದಾರೆ. ಪ್ರತಿಜ್ಞಾ ಕಾರ್ಯಕ್ರಮಕ್ಕೆ ಕೈ ನಾಯಕರೂ ಕೂಡ ಸಜ್ಜಾಗಿದ್ದು, ಕೆಪಿಸಿಸಿ ನೂತನ ಕಟ್ಟಡದಲ್ಲಿ ಸಕಲ ಸಿದ್ದತೆ ಮಾಡಲಾಗಿದೆ.