ಡಿಕೆಶಿ ಬಂಧನ ಹಿನ್ನೆಲೆ: ನಾಳೆ ರಾಮನಗರ ಬಂದ್, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ - ರಾಮನಗರ

🎬 Watch Now: Feature Video

thumbnail

By

Published : Sep 4, 2019, 9:42 PM IST

ದೆಹಲಿ ಕೋರ್ಟ್ ಕಾಂಗ್ರೆಸ್​ ಮುಖಂಡ ಡಿ.ಕೆ. ಶಿವಕುಮಾರ್​ರನ್ನು ಇಡಿ ವಶಕ್ಕೆ ನೀಡಿದ ಹಿನ್ನೆಲೆಯಲ್ಲಿ ಕನಕಪುರದಲ್ಲಿ ಮತ್ತೆ ಪ್ರತಿಭಟನಾ ಕಾವು ಹೆಚ್ಚಾಗಿದೆ. ನಾಳೆ‌ ರಾಮನಗರ‌ ಜಿಲ್ಲೆ ಬಂದ್​ಗೆ ಕರೆ ನೀಡಿರುವ ಹಿನ್ನೆಲೆ ಶಾಂತಿಯುತ ಪ್ರತಿಭಟನೆಗೆ ಅವಕಾಶ ಕಲ್ಪಿಸಲಾಗಿದೆ. ಅದಕ್ಕಾಗಿ ಈಗಾಗಲೇ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಸುಮಾರು 300 ಕ್ಕೂ ಹೆಚ್ಚು ಪೊಲೀಸ್​ ಸಿಬ್ಬಂದಿ ನಿಯೋಜಿಸಲಾಗಿದೆ. ವ್ಯಾಪಕ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಈಗಾಗಲೇ ಹಲವರನ್ನು ಪೊಲೀಸರು ಕನಕಪುರದಲ್ಲಿ ವಶಕ್ಕೆ‌ ಪಡೆದಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ ಕಾಲೇಜುಗಳಿಗೂ ರಜೆ ಘೋಷಿಸಿ ಜಿಲ್ಲಾಧಿಕಾರಿ ಎಂ.ಎಸ್ ಅರ್ಚನಾ ಆದೇಶ ಹೊರಡಿಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.