ಸಂವಿಧಾನ ಕುರಿತ ಗೊಂದಲದ ಸುತ್ತೋಲೆ: ಕೊಪ್ಪಳದಲ್ಲಿ ಪ್ರತಿಭಟನೆ - ದಲಿತ ಸಂಘಟನೆಗಳ ಕಾರ್ಯಕರ್ತರ ಪ್ರತಿಭಟನೆ
🎬 Watch Now: Feature Video
ಸಂವಿಧಾನ ರಚನೆ ಕುರಿತಂತೆ ಶಿಕ್ಷಣ ಇಲಾಖೆ ಹೊರಡಿಸಿರುವ ಸುತ್ತೋಲೆ ವಿರೋಧಿಸಿ ದಲಿತ ಸಂಘಟನೆಗಳ ಕಾರ್ಯಕರ್ತರು ಜಿಲ್ಲೆಯ ಕುಕನೂರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ಕುಕನೂರು ಪಟ್ಟಣದ ಅಂಬೇಡ್ಕರ್ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿ ಸರ್ಕಾರ ಹಾಗೂ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ಮತ್ತು ಶಿಕ್ಷಣ ಇಲಾಖೆಯು ಜಾಗೃತಿ ಅಭಿಯಾನ ಮಾರ್ಗದರ್ಶಿ ಪುಸ್ತಕದಲ್ಲಿ ಸುತ್ತೋಲೆ ಹೊರಡಿಸಿದೆ. ಈ ಸುತ್ತೋಲೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರು ಸಂವಿಧಾನ ರಚಿಸಿಲ್ಲ ಎಂದಿದೆ ಎಂದು ಆರೋಪಿಸಿದರು.