ದಲಿತರ ಮೇಲೆ ದೌರ್ಜನ್ಯ ಖಂಡಿಸಿ ಕೊಪ್ಪಳದಲ್ಲಿ ಪ್ರತಿಭಟನೆ.. ವಿಡಿಯೋ - Dalit Rights Committee protest in koppal
🎬 Watch Now: Feature Video
ಕೊಪ್ಪಳ: ತಾಲೂಕಿನ ಗುಳದಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ದಲಿತರ ಮೇಲೆ ದೌರ್ಜನ್ಯ ನಡೆಸಿದವರ ಮೇಲೆ ಸೂಕ್ತ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ದಲಿತ ಹಕ್ಕುಗಳ ಸಮಿತಿ ಕಾರ್ಯಕರ್ತರು ನಗರದ ಅಶೋಕ ಸರ್ಕಲ್ನಲ್ಲಿ ಪ್ರತಿಭಟನೆ ನಡೆಸಿದರು. ದಲಿತರ ಮೇಲೆ ಹಾಕಲಾಗಿರುವ ಸುಳ್ಳು ಮೊಕದ್ದಮೆ ವಾಪಸ್ ಪಡೆಯಬೇಕು ಹಾಗೂ ದಲಿತರ ಮೇಲೆ ದೌರ್ಜನ್ಯ ಮಾಡಿದವರ ಮೇಲೆ ಕಾನೂನು ಕ್ರಮಕೈಗೊಳ್ಳುವ ಮೂಲಕ ನ್ಯಾಯ ಒದಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.