ಹುಬ್ಬಳ್ಳಿಯ ಕೋವಿಡ್ ಸೆಂಟರ್ನಲ್ಲಿ ಮಹಿಳೆಯ ಸಖತ್ ನೃತ್ಯ... ವಿಡಿಯೋ ನೋಡಿ - hubli latest news
🎬 Watch Now: Feature Video
ಹುಬ್ಬಳ್ಳಿ: ಕೊರೊನಾ ಸೋಂಕಿತರಲ್ಲಿ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಧಾರವಾಡ ಜಿಲ್ಲೆಯ ಕೋವಿಡ್ ಸೆಂಟರ್ಗಳಲ್ಲಿ ಮನರಂಜನೆ ಹಾಗೂ ಕ್ರೀಡಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ. ಇಲ್ಲಿನ ಘಂಟಿಕೇರಿಯ ಬಿಸಿಎಂ ಹಾಸ್ಟೆಲ್ ಕೋವಿಡ್ ಕೇರ್ ಸೆಂಟರ್ನಲ್ಲಿಂದು ಸಮಾಜ ಕಲ್ಯಾಣ ಜಂಟಿ ನಿರ್ದೇಶಕ ಎನ್ ಆರ್ ಪುರುಷೋತ್ತಮ ಹಾಗೂ ನೋಡಲ್ ಅಧಿಕಾರಿ ಡಾ.ಸಂಪತ್ ಸಿಂಗ್ ನೇತೃತ್ವದಲ್ಲಿ ಶಟಲ್ ಬ್ಯಾಡ್ಮಿಂಟನ್ ಆಟ ಆಡಿಸಿ ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬಿದರು. ಇದೇ ಸಂದರ್ಭದಲ್ಲಿ ಮಹಿಳೆಯೊಬ್ಬರು ಡಾ.ರಾಜ್ಕುಮಾರ್ ಅವರ ಅಭಿನಯದ ಹಾಗೂ ಹುಬ್ಬಳ್ಳಿಯಲ್ಲಿ ಚಿತ್ರೀಕರಣಗೊಂಡ "ಹುಟ್ಟಿದರೇ ಕನ್ನಡನಾಡಲ್ಲಿ ಹುಟ್ಟಬೇಕು" ಎಂಬ ಹಾಡಿಗೆ ಹೆಜ್ಜೆ ಹಾಕಿ ಎಲ್ಲರನ್ನೂ ರಂಜಿಸಿದರು.