ದೂರುಗಳ ಮಹಾಪೂರ: ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ, ಡಾಕ್ಟರ್ಸ್ಗೆ ವಾರ್ನಿಂಗ್! - meggan hospital shivamogga
🎬 Watch Now: Feature Video
ಶಿವಮೊಗ್ಗ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ನಗರದ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವೈದ್ಯರೊಂದಿಗೆ ಹಾಗೂ ಸಾರ್ವಜನಿಕರೊಂದಿಗೆ ಮಾತುಕತೆ ನಡೆಸಿದರು. ಮೆಗ್ಗಾನ್ ಆಸ್ಪತ್ರೆ ಬಗ್ಗೆ, ಇಲ್ಲಿನ ವೈದ್ಯರ ಬಗ್ಗೆ ನಿತ್ಯ ನಿರಂತರ ದೂರುಗಳು ಬರುತ್ತಿವೆ. ವೈದ್ಯರು ಹಾಗೂ ಆಡಳಿತದ ನಡುವೆ ಸಮನ್ವಯದ ಕೊರತೆ ಕಾಣಿಸುತ್ತಿದೆ. ಇನ್ನು ಮುಂದೆ ಈ ರೀತಿಯ ಯಾವುದೇ ದೂರುಗಳು ಬಾರದಂತೆ ಕೆಲಸ ಮಾಡಬೇಕು ಎಂದು ವೈದ್ಯಾಧಿಕಾರಿಗಳಿಗೆ ಡಿಸಿ ಸೂಚನೆ ನೀಡಿದರು.